Text copied!
Bibles in Kannada

ಕೀರ್ತ 59:9-16 in Kannada

Help us?

ಕೀರ್ತ 59:9-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
14 ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
15 ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.
16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
ಕೀರ್ತ 59 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019