Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 5

ಕೀರ್ತ 5:2-8

Help us?
Click on verse(s) to share them!
2ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
3ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
5ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
6ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
7ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
8ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.

Read ಕೀರ್ತ 5ಕೀರ್ತ 5
Compare ಕೀರ್ತ 5:2-8ಕೀರ್ತ 5:2-8