Text copied!
Bibles in Kannada

ಕೀರ್ತ 5:8-11 in Kannada

Help us?

ಕೀರ್ತ 5:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
ಕೀರ್ತ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019