Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 6

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
2ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
6ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.