3ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
4ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ
5ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
7ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.