Text copied!
Bibles in Kannada

ಕೀರ್ತ 60:5-10 in Kannada

Help us?

ಕೀರ್ತ 60:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
ಕೀರ್ತ 60 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019