Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 62

ಕೀರ್ತ 62:1-5

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.

Read ಕೀರ್ತ 62ಕೀರ್ತ 62
Compare ಕೀರ್ತ 62:1-5ಕೀರ್ತ 62:1-5