Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 62

ಕೀರ್ತ 62:2-9

Help us?
Click on verse(s) to share them!
2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
8ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ
9ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.

Read ಕೀರ್ತ 62ಕೀರ್ತ 62
Compare ಕೀರ್ತ 62:2-9ಕೀರ್ತ 62:2-9