5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
8ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ
9ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
10ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
11ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
12ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.