Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 63

ಕೀರ್ತ 63:3-9

Help us?
Click on verse(s) to share them!
3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.
5ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
7ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
8ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.
9ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.

Read ಕೀರ್ತ 63ಕೀರ್ತ 63
Compare ಕೀರ್ತ 63:3-9ಕೀರ್ತ 63:3-9