Text copied!
Bibles in Kannada

ಕೀರ್ತ 63:3-9 in Kannada

Help us?

ಕೀರ್ತ 63:3-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
4 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.
5 ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
7 ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.
9 ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.
ಕೀರ್ತ 63 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019