Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 64

ಕೀರ್ತ 64:1-7

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.

Read ಕೀರ್ತ 64ಕೀರ್ತ 64
Compare ಕೀರ್ತ 64:1-7ಕೀರ್ತ 64:1-7