4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.