1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.
2ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
3ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
4ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.