Text copied!
Bibles in Kannada

ಕೀರ್ತ 65:5-10 in Kannada

Help us?

ಕೀರ್ತ 65:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
10 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
ಕೀರ್ತ 65 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019