6ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
7ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
9ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
10ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.