2ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
3ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
4ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ
5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ
8ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
9ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
10ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
11ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;