6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ
8ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
9ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
10ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
11ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
12ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.