Text copied!
Bibles in Kannada

ಕೀರ್ತ 68:10-19 in Kannada

Help us?

ಕೀರ್ತ 68:10-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.
11 ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
12 ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
15 ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
16 ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
19 ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ
ಕೀರ್ತ 68 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019