15ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
16ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
17ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
18ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ
20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
21ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.