Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 68

ಕೀರ್ತ 68:17-24

Help us?
Click on verse(s) to share them!
17ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
18ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ
20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
21ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
22ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.
23ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.
24ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.

Read ಕೀರ್ತ 68ಕೀರ್ತ 68
Compare ಕೀರ್ತ 68:17-24ಕೀರ್ತ 68:17-24