Text copied!
Bibles in Kannada

ಕೀರ್ತ 68:20-27 in Kannada

Help us?

ಕೀರ್ತ 68:20-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
22 ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.
23 ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.
24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
25 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
26 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.
27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
ಕೀರ್ತ 68 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019