25 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
26 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.
27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
28 ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.
29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.