Text copied!
Bibles in Kannada

ಕೀರ್ತ 69:12-24 in Kannada

Help us?

ಕೀರ್ತ 69:12-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.
15 ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
17 ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
20 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
22 ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
23 ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
24 ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
ಕೀರ್ತ 69 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019