Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 6

ಕೀರ್ತ 6:4-10

Help us?
Click on verse(s) to share them!
4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
6ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

Read ಕೀರ್ತ 6ಕೀರ್ತ 6
Compare ಕೀರ್ತ 6:4-10ಕೀರ್ತ 6:4-10