Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 71

ಕೀರ್ತ 71:16-24

Help us?
Click on verse(s) to share them!
16ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
18ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
19ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
20ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
21ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.
22ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
23ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
24ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.

Read ಕೀರ್ತ 71ಕೀರ್ತ 71
Compare ಕೀರ್ತ 71:16-24ಕೀರ್ತ 71:16-24