Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 71

ಕೀರ್ತ 71:2-11

Help us?
Click on verse(s) to share them!
2ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
5ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
7ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
8ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
9ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
10ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.

Read ಕೀರ್ತ 71ಕೀರ್ತ 71
Compare ಕೀರ್ತ 71:2-11ಕೀರ್ತ 71:2-11