Text copied!
Bibles in Kannada

ಕೀರ್ತ 71:2-12 in Kannada

Help us?

ಕೀರ್ತ 71:2-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
5 ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
7 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
9 ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
10 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019