Text copied!
Bibles in Kannada

ಕೀರ್ತ 71:3-7 in Kannada

Help us?

ಕೀರ್ತ 71:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
5 ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
7 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019