4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
5ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
7ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
8ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.