Text copied!
Bibles in Kannada

ಕೀರ್ತ 71:7-14 in Kannada

Help us?

ಕೀರ್ತ 71:7-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
9 ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
10 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
14 ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019