9ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
10ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
12ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
14ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
15ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
16ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.