Text copied!
Bibles in Kannada

ಕೀರ್ತ 72:1-11 in Kannada

Help us?

ಕೀರ್ತ 72:1-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವನು ಜೀವಿಸುವನು.
6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9 ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
ಕೀರ್ತ 72 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019