Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:11-17

Help us?
Click on verse(s) to share them!
11ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:11-17ಕೀರ್ತ 72:11-17