12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.