15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
18ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
19ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.