Text copied!
Bibles in Kannada

ಕೀರ್ತ 72:3-9 in Kannada

Help us?

ಕೀರ್ತ 72:3-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವನು ಜೀವಿಸುವನು.
6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9 ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
ಕೀರ್ತ 72 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019