Text copied!
Bibles in Kannada

ಕೀರ್ತ 72:9-15 in Kannada

Help us?

ಕೀರ್ತ 72:9-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
ಕೀರ್ತ 72 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019