10ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
11ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
12ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
13ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
14ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
15ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.