18ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
19ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
20ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
21ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
22ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
23ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,
24ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
25ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
26ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.