Text copied!
Bibles in Kannada

ಕೀರ್ತ 73:4-11 in Kannada

Help us?

ಕೀರ್ತ 73:4-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಮರಣವು ನಿರ್ಬಾಧಕವಾಗಿದೆ; ಅವರ ದೇಹವು ಕೊಬ್ಬಿದೆ.
5 ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
6 ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.
7 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
10 ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
11 ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
ಕೀರ್ತ 73 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019