Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 73

ಕೀರ್ತ 73:5-20

Help us?
Click on verse(s) to share them!
5ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
6ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.
7ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
8ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
9ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
10ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
11ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
12ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
13ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
14ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
15ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.
16ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
18ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
19ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
20ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.

Read ಕೀರ್ತ 73ಕೀರ್ತ 73
Compare ಕೀರ್ತ 73:5-20ಕೀರ್ತ 73:5-20