Text copied!
Bibles in Kannada

ಕೀರ್ತ 73:7-25 in Kannada

Help us?

ಕೀರ್ತ 73:7-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
10 ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
11 ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
12 ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
13 ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
15 ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.
16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
19 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
20 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
21 ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
22 ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,
24 ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
25 ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
ಕೀರ್ತ 73 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019