Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 74

ಕೀರ್ತ 74:1-17

Help us?
Click on verse(s) to share them!
1ಆಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
2ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
3ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
4ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
5ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
6ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
7ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
8“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
9ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
10ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
11ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
12ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
15ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
16ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
17ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.

Read ಕೀರ್ತ 74ಕೀರ್ತ 74
Compare ಕೀರ್ತ 74:1-17ಕೀರ್ತ 74:1-17