Text copied!
Bibles in Kannada

ಕೀರ್ತ 74:10-15 in Kannada

Help us?

ಕೀರ್ತ 74:10-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
11 ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
12 ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14 ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
ಕೀರ್ತ 74 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019