Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 74

ಕೀರ್ತ 74:12-23

Help us?
Click on verse(s) to share them!
12ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
15ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
16ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
17ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
18ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
19ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
20ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
21ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
22ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
23ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.

Read ಕೀರ್ತ 74ಕೀರ್ತ 74
Compare ಕೀರ್ತ 74:12-23ಕೀರ್ತ 74:12-23