13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
15ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
16ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.