Text copied!
Bibles in Kannada

ಕೀರ್ತ 74:15-19 in Kannada

Help us?

ಕೀರ್ತ 74:15-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
16 ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
17 ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
19 ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
ಕೀರ್ತ 74 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019