3ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
4ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
5ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
6ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.