1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
2ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
3ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ